ಹೈಸ್ಕೂಲು ದಿನಗಳಿಂದಲೂ ಪತ್ರಕರ್ತರ ಬಗ್ಗೆ ನನಗೆ ವಿಲಕ್ಷಣವಾದ ಕುತೂಹಲ ಬೆಳೆದಿತ್ತು. ಯಾವ ಹಾಲಿವುಡ್ ಹೀರೋನ ಸಾಹಸಗಳಿಗೂ ಕಡಿಮೆಯಿರದ ‘ಹಾಯ್ ಬೆಂಗಳೂರ್’ ಸಂಪಾದಕರಾದ ರವಿ ಬೆಳಗೆರೆಯವರ ಚಿತ್ರ ವಿಚಿತ್ರ ಸಾಧನೆಗಳು, ಮೈಲುಗಲ್ಲುಗಳು ಹಾಗೂ ರೋಮಾಂಚನಕಾರಿ ಸಾಹಸಗಳು, ಅವುಗಳಷ್ಟೇ ಥ್ರಿಲ್ಲಿಂಗಾಗಿರುತ್ತಿದ್ದ ಅವರ ಬರವಣಿಗೆ ಪತ್ರಕರ್ತ ಎಂದರೆ ಸಿನೆಮಾದಲ್ಲಿ ಅಕರಾಳ-ವಿಕಾರಾಳವಾಗಿ ಮುಖಭಾವ ಪ್ರಕಟಿಸುತ್ತಾ ಆಕ್ರಮಣ ಮಾಡುವ ಹತ್ತಾರು ಮಂದಿ ದಾಂಢಿಗರಿಗೆ ಒದೆ ಕೊಟ್ಟು ಗರಿ ಮುರಿಯದ ಶರ್ಟನ್ನೊಮ್ಮೆ ಕೊಡವಿ ನಿಂತು ಕೈ ಬೀಸುವ ಸಣಕಲ ಹೀರೋನ ಹಾಗೆ ಎಂಬ ಭ್ರಮೆಯನ್ನು ಮೂಡಿಸುತ್ತಿದ್ದವು. [...]
Filed under: ದಿನಚರಿಯ ಪುಟಗಳಿಂದ | Tagged: ಪತ್ರಿಕೆಗಳು, ಪರಿಸರದ ಕಥೆ, ಪ್ರತಾಪ್ ಸಿಂಹ, ಮಾಂಡೋವಿ, ರವಿ ಬೆಳಗೆರೆ, ವಿಜಯ ಕರ್ನಾಟಕ, ವಿಶ್ವ ವಿಸ್ಮಯ, ವಿಶ್ವೇಶ್ವರ ಭಟ್, ಸಬ್ಬತ್, ಹಾಯ್ ಬೆಂಗಳೂರು, ಹೇಳಿ ಹೋಗು ಕಾರಣ | 6 Comments »