Posted on September 26, 2009 by uniquesupri
ರುಜುವಾತು ಪಡಿಸಲು ಸಾಕಷ್ಟು ಸಾಕ್ಷಿಗಳು ಇಲ್ಲದ ಸಂದರ್ಭದಲ್ಲಿಯೂ ಒಂದು ಸಂಗತಿಯನ್ನು ಗಾಢವಾಗಿ ನಂಬುವುದಕ್ಕೆ ಶ್ರದ್ಧೆ ಎನ್ನುವರು.
ಕೃಷ್ಣ ಎನ್ನುವ ಹತ್ತು ವರ್ಷದೊಳಗಿನ ಬಾಲಕ ತನ್ನ ಕಿರು ಬೆರಳಿನಲ್ಲಿ ಗೋವರ್ಧನ ಎನ್ನುವ ಹೆಸರಿನ ಬೆಟ್ಟವನ್ನು ಎತ್ತಿದ. ಅದರಡಿಯಲ್ಲಿ ಇಡೀ ಯಾದವರ ಊರು ಆಶ್ರಯವನ್ನು ಪಡೆದಿತ್ತು. ಈ ಪುರಾಣದ ಕತೆಯನ್ನು ಮನುಷ್ಯನ ಅದ್ಭುತ ಕಲ್ಪನೆಯ ಸೃಷ್ಟಿಯಾಗಿ, ಒಂದು ಪ್ರತಿಮೆಯಾಗಿ, ಸಂಕೇತವಾಗಿ ಒಪ್ಪಿಕೊಳ್ಳುವುದರಲ್ಲಿ ಯಾವ ತಪ್ಪೂ ಇಲ್ಲ. ಆದರೆ ಇದನ್ನು ಅಕ್ಷರಶಃ ಸತ್ಯವೆಂದು ಯಾವ ಸಾಕ್ಷಿಯೂ ಇಲ್ಲದೆ ನಂಬುವುದು ಶ್ರದ್ಧೆ ಎನ್ನಿಸಿಕೊಳ್ಳುತ್ತದೆ. [...]
Filed under: ಓದು - ಅನುಭವ | Tagged: ಕ್ರಿಸ್ಟೋಫರ್ ಹಿಚಿನ್ಸ್, ಧರ್ಮ, ನಂಬಿಕೆ, ನನ್ನ ಭಾಗ್ರಫಿ, ಬೀಚಿ, ಶ್ರದ್ಧೆ, christopher hitchins | Leave a Comment »
Posted on May 29, 2009 by uniquesupri
ಕಳೆದೊಂದು ವಾರದಿಂದ ಇನ್ಫಿನಿಟಿ ಎಂದು ಕರೆಯಲ್ಪಡುವ ‘ಅನಂತ’ದ ನಾನಾ ಮಜಲುಗಳನ್ನು ಕೌತುಕ ಹಾಗೂ ಬೆರಗಿನಿಂದ ಅರಿಯುತ್ತಿದ್ದೇನೆ. ಗಣಿತ ಹಾಗೂ ಭೌತಶಾಸ್ತ್ರದಲ್ಲಿ ಅಪಾರ ಅಧ್ಯಯನ ಮಾಡಿರುವ ಕೇಂಬ್ರಿಜ್ ವಿಶ್ವ ವಿದ್ಯಾಲಯದ ಉಪನ್ಯಾಸಕ ಜಾನ್.ಡಿ.ಬರೋ ಬರೆದಿರುವ ‘ದಿ ಇನ್ಫೈನೈಟ್ ಬುಕ್’ ಕಣ್ಣೆದುರಿನ ದಿನನಿತ್ಯದ ಜಗತ್ತನ್ನು ಮರೆಸಿ ಕ್ಷಣಕಾಲ ಅಗ್ರಾಹ್ಯವಾದ, ಅಪರಿಮಿತವಾದ ಅನಂತದ ಝಲಕ್ ತೋರಿಸುತ್ತದೆ. ನಮ್ಮ ಸೀಮಿತ ಬುದ್ಧಿ ಗ್ರಹಿಸಲು ಸಾಧ್ಯವೇ ಇಲ್ಲದ ಅನಂತದ ವಿಷಯವನ್ನು ಆದಷ್ಟು ಕುತೂಹಲಕರವಾಗಿ, ಗಣಿತ, ಭೌತಶಾಸ್ತ್ರದಲ್ಲಿ ಸಾಮಾನ್ಯ ತಿಳುವಳಿಕೆಯಿರುವ ಪ್ರತಿಯೊಬ್ಬನೂ ಸವಿಯಬಹುದಾದ ಹದದಲ್ಲಿ ಬರೋ [...]
Filed under: ಓದು - ಅನುಭವ | Tagged: ಅನಂತ, ಇನ್ಫಿನಿಟಿ, ಜಾನ್ ಬರೋ, ದಿ ಇನ್ಫೈನೈಟ್ ಬುಕ್, ಪುಸ್ತಕ ಓದು | 2 Comments »